ನವದೆಹಲಿ: 2022 ತಿಂಗಳ ಆರಂಭದಲ್ಲಿಯೇ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಎಂದು ಟೈಮ್ಸ್ ನೌ -ಪೋಲ್ ಸ್ಟಾರ್ಟ್ ಸಮೀಕ್ಷೆ ಭವಿಷ್ಯ ನುಡಿದಿದೆ.
ನಡೆಸಿದ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ವಿಚಾರ ತಿಳಿದು ಬಂದಿದೆ. ಆದರೆ 2017ರಲ್ಲಿ ನಡೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಹಲವು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಸಮೀಕ್ಷಾ ವರದಿ
ತಿಳಿಸಿದೆ.
ಇ ಚುನಾವಣೆಯಲ್ಲಿ ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 239 ರಿಂದ 245 ಕ್ಷೇತ್ರಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ. ಸಮಾಜವಾದಿ ಪಕ್ಷ ಅತ್ಯುತ್ತಮ ಸಾಧನೆ ಪ್ರದರ್ಶಿಸುವ ನಿರೀಕ್ಷೆ ಇದೆ. 119- 125 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಜಯಗಳಿಸಲಿದೆ ಎಂದು ಸಮೀಕ್ಷೆ ಸೂಚಿಸಿದೆ.
ಮಾಯಾವತಿ ನೇತೃತ್ವದ ಬಿಎಸ್ ಪಿಯ ಮತ ಬಿಜೆಪಿ ಮತ್ತು ಎಸ್ ಪಿ ಗೆ ಹಂಚಿ ಹೋಗಲಿದೆ. ಅದಲ್ಲದೆ ಬಿಎಸ್ ಪಿ 30 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಮುನ್ಸೂಚನೆ ನೀಡಿದೆ.
ಕಾಂಗ್ರೆಸ್ 5 ರಿಂದ 8 ಕ್ಷೇತ್ರಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ ಎಂದು ಟೈಮ್ಸ್ ನೌ -ಪೋಲ್ ಸ್ಟಾರ್ಟ್ ನ ಸಮೀಕ್ಷಾ ವರದಿ ತಿಳಿಸಿದೆ..
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ