ಉಡುಪಿ: ವಿಧಾನ ಪರಿಷತ್ತಿನ ಚುನಾವಣೆಗೆ ಸಂಬಂಧಿಸಿ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಮೊದಲ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಆಯ್ಕೆಯಾಗಿದೆ.
ಇನ್ನು ಎರಡನೇ ಅಭ್ಯರ್ಥಿಯ ಆಯ್ಕೆ ಸಂಬಂಧ ಜಿಲ್ಲಾ ಕೋರ್ ಸಮೀತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಲಾಡಿ ಸುರೇಶ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ ಮುರ್ನಾಲ್ಕು ದಿನದ ಒಳಗೆ ಶ್ರೀನಿವಾಸ ಪೂಜಾರಿಯವರ ಹೆಸರನ್ನು ಅಧಿಕೃತ ಘೋಷಣೆ ಮಾಡಲಾಗುತ್ತದೆ. ಎರಡನೇ ಅಭ್ಯರ್ಥಿಯನ್ನು ನಿಲ್ಲಿಸುವ ಸಂಬಂಧ ಚರ್ಚೆ ನಡೆಸಲಿದ್ದೇವೆ ಎಂದರು.
ಈ ನಿಟ್ಟಿನಲ್ಲಿ ಯಾವುದೇ ಸ್ವತಂತ್ರ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ. ಒಂದೊಮ್ಮೆ ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಇದ್ದರೂ ಒಂದನೇ ಅಭ್ಯರ್ಥಿಗೆ ಎಲ್ಲ ಪ್ರಾಶಸ್ತ್ಯ ಮತಗಳನ್ನು ಹಾಕಿಸಲು ಪ್ರಯತ್ನ ಮಾಡಲಾಗುವುದು ಎಂದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ