ಉಡುಪಿ:-ಪದ್ಮ ಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಇಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಕಡುಬಡತನದಿಂದ ಬಂದ ನನಗೆ ಪದ್ಮ ಪ್ರಶಸ್ತಿ ಲಭಿಸಿದ್ದು ,ವಿಮಾನದಲ್ಲಿ ಓಡಾಡುವ, ರಾಷ್ಟ್ರಪತಿಗಳಿಂದ ಪದ್ಮಶ್ರೀ ಪುರಸ್ಕಾರ ಪಡೆಯುವ, ಗಣ್ಯರಿಂದ ಗೌರವ ಸ್ವೀಕರಿಸುವ ಅವಕಾಶ ಸಿಕ್ಕಿದ್ದು, ಜೀವನದ ಅತಿದೊಡ್ಡ ಸೌಭಾಗ್ಯ ಎಂದು ಹೇಳಿದರು.
ನಾನು ಶಾಲೆಯಲ್ಲಿ ಕಲಿತವನಲ್ಲ, ಬಡತನದ ಬೇಗೆಯಲ್ಲಿ ಬೆಂದಿದ್ದ ನನಗೆ ಶಿಕ್ಷಣದ ಮಹತ್ವದ ಅರಿವಾಗಿ, ಕಿತ್ತಳೆ ಹಣ್ಣು ಮಾರಿ ಬಂದ ಹಣದಿಂದ ಶಾಲೆ ಆರಂಭಿಸಿದೆ. ತೀರಾ ಸಾಮಾನ್ಯ ವ್ಯಕ್ತಿಯ ಕಾರ್ಯವನ್ನು ಗುರುತಿಸಿ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿದೆ. ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಸನ್ಮಾನ ಮಾಡುತ್ತಿವೆ. ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು.
ಇನ್ನು ಕಾರ್ಯಕ್ರಮದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮಾತನಾಡಿ ಪಿಯುಸಿ ಮುಗಿದ ಬಳಿಕ ಮೊದಲ ವರ್ಷದ ಪದವಿಗೆ ಸೇರಿದ ಕೂಡಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ, ಅಗತ್ಯ ತರಬೇತಿ ಪಡೆದುಕೊಳ್ಳಿ ಎಂದು ಲೋಕಾಯುಕ್ತರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಎಂ.ಜಿ.ಎಂ. ಕಾಲೇಜು ಪ್ರಾಂಶುಪಾಲ ದೇವಿದಾಸ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ