Slider


ಭ್ರಷ್ಟರ ಬೇಟೆ:- ರಾಜ್ಯಾದ್ಯಂತ ಎ.ಸಿ.ಬಿ ದಾಳಿ

ಭ್ರಷ್ಟರ ಬೇಟೆ:- ರಾಜ್ಯಾದ್ಯಂತ ಎ.ಸಿ.ಬಿ ದಾಳಿ

ಬೆಂಗಳೂರು:-ರಾಜ್ಯಾದ್ಯಂತ ಸುಮಾರು ೬೦ ಕ್ಕೂ ಹೆಚ್ಚು ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಎ.ಸಿ.ಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಕೆಎಸ್ಎಸ್ ಅಧಿಕಾರಿ ನಾಗರಾಜ್ ಮನೆ, ಕಚೇರಿ ಮೇಲೆಯಲ್ಲೂ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸುಮಾರು 400 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರು, ಕಲಬುರಗಿ, ದಾವಣಗೆರೆ, ಬೆಳಗಾವಿಯ ಗೋಕಾಕ್, ಮಂಡ್ಯದಲ್ಲಿ ಎಸಿಬಿ ದಾಳಿ ನಡೆದಿದೆ.
ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಗದಗದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ನಿವಾಸದ ಮೇಲೆ ದಾಳಿ ನಡೆದಿದೆ.
ವರದಿ:-ಉಡುಪಿ ಫಸ್ಟ್


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo