ಉಡುಪಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಮಧ್ಯಾಹ್ನ ವೇಳೆ ಮಳೆಯಾಗಿದೆ.
ಆದರೆ ಕಾರ್ಕಳ, ಬ್ರಹ್ಮಾವರ , ಸಾಸ್ತಾನ, ಕುಂದಾಪುರ ಸೇರಿದಂತೆ ಕೆಲವು ಕಡೆಗಳಲ್ಲಿ ಸಂಜೆ ಬಳಿಕ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಕಾಲಿಕವಾಗಿ ಸುರಿದ ಮಳೆಯಿಂದ ಕಾರ್ಕಳದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕಾರ್ಕಳ ಶ್ರೀ ಅನಂತಪದ್ಮನಾಭ ದೇವಸ್ಥಾನದ ಹೊರಾಂಗಣಕ್ಕೆ ನೀರು ನುಗ್ಗಿದೆ. ಅಲ್ಲದೆ ಜಿಲ್ಲೆಯ ಕೆಲವೆಡೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಕಟಾವು ಮಾಡಿ ಮನೆಯ ಅಂಗಳದಲ್ಲಿ ರಾಶಿ ಹಾಕಿದ್ದ ಭತ್ತಕ್ಕೆ ಹಾನಿಯಾಗಿದೆ. ಇದರಿಂದ ಕೃಷಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ