Slider

ಉಡುಪಿ:-ಶ್ರೀ ಕೃಷ್ಣ ಮಠದಲ್ಲಿ ಸಂಭ್ರಮದ ಲಕ್ಷದೀಪೋತ್ಸವ

ಶ್ರೀಕೃಷ್ಣಮಠದಲ್ಲಿ ಮಂಗಳವಾರ ಉತ್ಥಾನ ದ್ವಾದಶಿಯಂದು ತುಳಸೀ ಪೂಜೆಯ ಬಳಿಕ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ ವಿಜ್ರಂಭಣೆಯಿಂದ ನಡೆಯಿತು.

ಗರ್ಭಗುಡಿಯಿಂದ ಉತ್ಸವ ಮೂರ್ತಿಯನ್ನು ಸ್ವರ್ಣ ಪಲ್ಲಕ್ಕಿಯಲ್ಲಿಟ್ಟು ಮಧ್ವ ಸರೋವರದಲ್ಲಿ ತೆಪ್ಪೋತ್ಸವ ನಡೆಸಿ, ಬಳಿಕ ಉತ್ಸವ ಮೂರ್ತಿಯನ್ನು ರಥದಲ್ಲಿರಿಸಿ ರಥಬೀದಿಯ ಸುತ್ತಲೂ ರಥೋತ್ಸವ ನೆರವೇರಿಸಲಾಯಿತು.

ರಥಬೀದಿಯ ಸುತ್ತಲೂ ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು. ಜೊತೆಗೆ ಗೂಡುದೀಪಗಳು ಹಾಗೂ ರಥಬೀದಿಯ ಸುತ್ತಲೂ ಮರದ ಕಟ್ಟಿಗೆಯಿಂದ ಮಾಡಿದ್ದ ಪಟ್ಟಿಯಲ್ಲಿ ದೀಪವನ್ನು ಹಚ್ಚಿ ದೀಪೋತ್ಸವಕ್ಕೆ ಇನ್ನಷ್ಟು ಮೆರುಗನ್ನು ನೀಡಲಾಗಿತ್ತು.

ಈ ವೇಳೆ ಪರ್ಯಾಯ ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಪಲಿಮಾರು ಮಠಾಧೀಶರಾದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಹಾಗೂ ಹಲವು ಮಠಾಧೀಶರು ಉಪಸ್ಥಿತರಿದ್ದರು.

ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo