ಉಡುಪಿ: ಇಂದು ಬೆಳಗಿನ ಜಾವ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಡುಪಿ ನಗರಸಭೆ ಮ್ಯಾನೇಜರ್ ವೆಂಕಟರಮಣಯ್ಯ (49) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ನ.21ರಂದು ಮದ್ಯಾಹ್ನ 12 ಗಂಟೆಗೆ ಕುಂಜಿಬೆಟ್ಟು ಎದುರು ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದರು. ಆ ಸಂದರ್ಭದಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ವೆಂಕಟರಮಣಯ್ಯರಿಗೆ ಢಿಕ್ಕಿ ಹೊಡೆದಿತ್ತೆನ್ನಲಾಗಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ವೆಂಕಟರಮಣಯ್ಯ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ