ಕೋಟ : ಮಕ್ಕಳಿಗೆ ಉತ್ತಮ ಸಂಸ್ಕೃತಿ, ವಿದ್ಯೆಯನ್ನು ಕಲಿಸುವುದರ ಜೊತೆಗೆ ಪೋಷಕರು ಮಕ್ಕಳತನವನ್ನು ಅನುಭವಿಸಬೇಕು. ಅಸಹಜ ಬದುಕಿನಿಂದ ಹೊರಬಂದು, ಯಾವುದೇ ನಿರ್ಬಂಧಗಳನ್ನು ಹೇರದೇ ಅವರು ಸ್ವತಂತ್ರವಾಗಿ ಬದುಕಲು ಮತ್ತು ಅವರ ಪ್ರತಿಭೆಗಳನ್ನು ಹೊರಹಾಕಲು ಅವಕಾಶ ಮಾಡಿಕೊಡಬೇಕು ಎಂದು ಬ್ರಹ್ಮಾವರದ ತಹಶೀಲ್ದಾರ್ ರಾಜಶೇಖರ ಮೂರ್ತಿ ಹೇಳಿದರು.
ಕೋಟ ಡಾಕ್ಟರ್ .ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ಭಾನುವಾರ ಕೋಟತಟ್ಟು ಗ್ರಾಮ ಪಂಚಾಯತ್, ಉಡುಪಿಯ ಡಾ.ಶಿವರಾಮ ಕಾರಂತ ಟ್ರಸ್ಟ್ ಮತ್ತು ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನದ ಸಂಯುಕ್ತ
ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಚಿಲುಮೆ 2021ರ ಅಂಗವಾಗಿ ನಡೆದ ಅಪ್ಪುಗಾನ ನಮನ, ಉಡುಪಿ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ, ಚಿತ್ರಸಂತೆ, ಕಾರಂತ ಬಾಲ ಪುರಸ್ಕಾರ ಪ್ರದಾನ, ಕುದ್ರು ಪೋಸ್ಟರ್ ಅನಾವರಣ, ನಾಟಕ ಪ್ರದರ್ಶನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ಉದಯೋನ್ಮುಖ ವಿದ್ಯಾರ್ಥಿ ರೋಶನ್ ಗಿಳಿಯಾರು ಮಕ್ಕಳ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಕೂಡು ಕುಟುಂಬ ಇಂದು ಇಲ್ಲದೇ ಇರುವುದರಿಂದ ಮಕ್ಕಳಿಗೆ ಪೌರಾಣಿಕ ಕಥೆ ಕೇಳುವ ಭಾಗ್ಯ ದೂರವಾಗಿದೆ. ಕೋವಿಡ್ ಸಮಯದಲ್ಲಿ ನಲುಗಿರುವ ನಮ್ಮಂತ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಪೋಷಣೆಯ ಅಗತ್ಯವಿದೆ ಎಂದು ಹೇಳಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯಿತಿ ಪಿಡಿಓ ಶೈಲಾ ಎಸ್ ಪೂಜಾರಿಯವರು ವಹಿಸಿದ್ದರು.
ಇದೇ ಸಂದರ್ಭದಲ್ಲಿ ಕೋಟದ ಪ್ರಗತಿಪರ ಕೃಷಿಕ ರವೀಂದ್ರ ಐತಾಳ ಚಿತ್ರಸಂತೆ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕ ಗಿರೀಶ್ ಆಚಾರ್ಯ ಮತ್ತು ರೋಶನ್ ಗಿಳಿಯಾರು ಅವರನ್ನು ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅತಿಥಾಗಳಾಗಿ ಸಾಂಸ್ಕೃತಿಕ ಚಿಂತಕಿ ಹಾಗೂ ವಕೀಲೆ ಬಿಂದು ತಂಗಪ್ಪನ್, ಸಾಲಿಗ್ರಾಮ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರನಾಥ ಹೊಳ್ಳ, ಯಡ್ತಾಡಿಯ ಉದ್ಯಮಿ ರಾಜು ಪೂಜಾರಿ, ಅಮೃತಾ ಉಪಾಧ್ಯ, ಭಾಗೇಶ್ವರಿ ಮಯ್ಯ ಉಪಸ್ಥಿತರಿದ್ದರು. ಪ್ರತಿಷ್ಟಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮವನ್ನು ಕಾರಂತ ಥೀಂ ಪಾರ್ಕ್ನ ಕರ್ತವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ಮೇಲ್ವಿಚಾರಕ ಪ್ರಶಾಂತ್ ವಂದಿಸಿದರು. ಅಧ್ಯಾಪಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು. ನಂತರ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು.
ವರದಿ:-ಉಡುಪಿ ಫಸ್ಟ್
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ