ಉಡುಪಿ/ದ.ಕ:- ಹೊಣೆಗೇಡಿ ಮಂಗಳೂರು ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಸಿಗುವುದೇ ನ್ಯಾಯ...?
ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯ ಫಲಿತಾಂಶದಲ್ಲಿ ವಿವಿ ಮಾಡಿದ ತಪ್ಪಿನಿಂದಾಗಿ ಇದೀಗ ವಿದ್ಯಾರ್ಥಿಗಳು ಸಂಕಷ್ಟವನ್ನು ಎದುರಿಸುವಂತಾಗಿದೆ.
ವಿದ್ಯಾರ್ಥಿಗಳ ಹಿತದ ಪರವಾಗಿ ಕಾರ್ಯನಿರ್ವಹಿಸಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯ ತನ್ನ ಎಲ್ಲಾ ಜವಾಬ್ದಾರಿಯನ್ನು ಮರೆತು ತನ್ನ ಕರ್ತವ್ಯದಿಂದ ನುಣಿಚಿಕೊಳ್ಳುವ ಯತ್ನ ನಡೆಸಿದ್ಯಾ..? ಹೀಗೊಂದು ಅನುಮಾನವನ್ನು ಮೂಡಿಸುವಂತಿದೆ ಮಂಗಳೂರು ವಿಶ್ವವಿದ್ಯಾಲಯದ ನಡೆ.
ಆದರೆ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಇನ್ನೂ ಕೂಡ ಬಂದಿಲ್ಲ, ಕೆಲವು ವಿದ್ಯಾರ್ಥಿಗಳ ಐದನೇ ಸೆಮಿಸ್ಟರ್ ಹಾಗೂ ಇನ್ನು ಕೆಲವು ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿಲ್ಲ ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮುಂದಿನ ಉನ್ನತ ಶಿಕ್ಷಣಕ್ಕೆ ತೆರಳಲು ಪರಿತಪಿಸುವಂತಾಗಿದೆ.
ಕೆಲವು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಅಂಕಿಗಳನ್ನೇ ನಮೂದಿಸದೆ, ಫೇಲ್ ಎಂದು ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಮಂಗಳೂರು ವಿವಿಯ ಅವಾಂತರಗಳು ಕೇವಲ ಇಷ್ಟಕ್ಕೇ ಮುಗಿದಿಲ್ಲ .. ಈಗಾಗಲೇ ಪ್ರಕಟಿಸಿದ ಫಲಿತಾಂಶದಲ್ಲೂ ಸಾಲು ಸಾಲು ಯಡವಟ್ಟುಗಳನ್ನು ಮಾಡಿಕೊಂಡಿದೆ. ಉತ್ತಮ ಅಂಕಗಳನ್ನು ತೆಗೆದುಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನು ಫೇಲ್ ಮಾಡಿದೆ. ಜೊತೆಗೆ ಮಾರ್ಕ್ಸ್ ಡಾಟಾ ಎಂಟ್ರಿ ಮಾಡುವಲ್ಲೂ ತಪ್ಪುಗಳು ನಡೆದಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸದೇ ಹೋದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ