Slider

ಕೋವಿಡ್ ಸೋಂಕನ್ನು ಎದುರಿಸಲು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಿ:-ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಸೂಚನೆ09-12-2021

ಉಡುಪಿ: ಈತ್ತೀಚಿನ ಕೆಲವು ದಿನಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತಿದ್ದು ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕನ್ನು ಎದುರಿಸಲು ಸರಕಾರಿ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆಗಳನ್ನು ನೀಡಿದ್ದಾರೆ.

ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕೋವಿಡ್-19ರ ಕಳೆದೆರಡು ಅಲೆಗಳಲ್ಲಿ ಸರಕಾರದ ಜೊತೆಗೆ ಖಾಸಗಿ ಆಸ್ಪತ್ರೆಗಳು ಅತ್ಯುತ್ತಮ ರೀತಿಯಲ್ಲಿ ಸ್ಪಂದಿಸಿ, ಸೋಂಕಿತರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಿದ್ದು, ಎಲ್ಲಾ ರೀತಿಯ ಸಹಕಾರವನ್ನೂ ನೀಡಿವೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಸಹಕಾರವನ್ನು ನೀಡುವ ಮೂಲಕ ಮುಂದಿನ ದಿನಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದವರು ಹೇಳಿದರು.

ಖಾಸಗಿ ಆಸ್ಪತ್ರೆಗಳು ಸಂಭಾವ್ಯ ಕೋವಿಡ್ ಸೋಂಕನ್ನು ಎದುರಿಸಲು ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು. 2ನೇ ಅಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯವಿದ್ದ ಪ್ರಾಣವಾಯುವಿನ ಸಮಸ್ಯೆ ರಾಜ್ಯದಲ್ಲಿ ಉಂಟಾಗಿದ್ದ ಹಿನ್ನೆಲೆ, ಆಕ್ಸಿಜನ್ ಸಂಗ್ರಹ ಮಾಡುವ ಜಂಬೋ ಸಿಲೆಂಡರ್, ಡ್ಯುರೋ ಸಿಲೆಂಡರ್‌ಗಳನ್ನು ಅವಶ್ಯಕತೆಗೆ ತಕ್ಕಂತೆ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಡಿಎಚ್‌ಓ ಡಾ. ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ.ಶ್ರೀರಾಮರಾವ್ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಖಾಸಗಿ ಅಸ್ಪತ್ರೆಗಳಿಗೆ ನಿಯೋಜಿಸಿದ್ದ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo