ಉಡುಪಿ : ಕೊವೀಡ್ 19 ನಿಯಮ ಉಲ್ಲಂಘಿಸಿ, ಮೆರವಣಿಗೆ ನಡೆಸಿದ ಸಿಪಿಎಂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಪಿಐಎಂನ ಜಿಲ್ಲಾ ಸಮ್ಮೇಳನದ ಅಂಗವಾಗಿ ಸಿಪಿಎಂ ಮುಖಂಡರು ಹಾಗೂ ಕಾರ್ಯಕರ್ತರು, ಉಡುಪಿ ಬೋರ್ಡ್ ಹೈಸ್ಕೂಲಿನಿಂದ ಬ್ರಹ್ಮಗಿರಿ ವೃತ್ತದ ತನಕ ಮೆರವಣಿಗೆ ನಡೆಸಿದ್ದರು.
ಮೆರವಣಿಗೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಾಗಿ ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣೆಯಲ್ಲಿ ಸಿಪಿಎಂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ..
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ