Slider

ಮಕ್ಕಳಿಗೆ ನೀಡುವ ಮೊಟ್ಟೆಯ ಹಣವನ್ನು ತಾಯಿಗೆ ನೀಡಲಿ:-ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ11-12-2021

ಚಿಕ್ಕಮಗಳೂರು: ಮಕ್ಕಳಿಗೆ ನೀಡುವ ಆಹಾರವನ್ನು ತಾಯಿಗೆ ನೀಡಬೇಕು. ಒಬ್ಬಳು ತಾಯಿಗಿಂತ ಚೆನ್ನಾಗಿ ಮಕ್ಕಳನ್ನು ಯಾರು ನೋಡಕೊಳ್ಳುವುದಿಲ್ಲ. ಮಕ್ಕಳಿಗೆ ಮೊಟ್ಟೆ ನೀಡುವ ಬದಲು  ಆ ತಾಯಿ ಕೈಗೆ ದುಡ್ಡು ಕೊಟ್ಟರೆ ಚೆನ್ನಾಗಿ ಆಹಾರವನ್ನು ನೀಡಬಹುದು.

ಈ ಕುರಿತು ಚರ್ಚೆ ನಡೆಯಬೇಕು ಎಂದು ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿವಾದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಆಹಾರ ಪದ್ಧತಿ ಎನ್ನುವುದು ಅವರವರ ಆಯ್ಕೆಗೆ ಬಿಟ್ಟಿದ್ದು.  ಈ ವಿಷಯಕ್ಕೆ ಸಂಬಂಧಿಸಿ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ , ಯಾವುದೇ ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ.

ಮೊಟ್ಟೆ ಕೊಡುವ ಕುರಿತು ಕೆಲ ಸಮಾಜಕ್ಕೆ ನೋವು ತರುತ್ತದೆ ಅಂದರೆ ಸರ್ಕಾರ  ವಿಚಾರವನ್ನು ಮರುಪರಿಶೀಲನೆ  ಮಾಡಬೇಕು. 

ಈ ಕುರಿತು ಸಿ ಎಂ ಬಸವರಾಜ ಬೊಮ್ಮಾಯಿ ಯಾವುದೇ ಜೊತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ‌ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo