ಉಡುಪಿ:- ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮರ್ಣೆ ಗ್ರಾಮದ ಎಣ್ಣೆಹೊಳೆ ಎಂಬಲ್ಲಿ ನಡೆದಿದೆ.
ಮೃತರನ್ನು ಎಣ್ಣೆಹೊಳೆ ನಿವಾಸಿ ಬಿ.ಇಬ್ರಾಹಿಂ ಎಂಬವರ ಮಗ ರಫೀಕ್(48) ಎಂದು ಗುರುತಿಸಲಾಗಿದೆ.
ರಫೀಕ್ ಬುದ್ದಿಮಾಂದ್ಯ ಆಗಿದ್ದರು ಎನ್ನಲಾಗಿದೆ.ಇವರು ಮನೆ ಸಮೀಪದ ಬಾವಿಗೆ ಆಕಸ್ಮಿಕವಾಗಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ