ಉಡುಪಿ : ಬಾಲಕಿಗೆ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿ, ಮಾನಸಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಒಡ್ಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ 2013 ರ ಎಪ್ರಿಲ್ 6 ರಂದು ಸಂಜೆ 4:30 ರ ಸುಮಾರಿಗೆ ಉಡುಪಿ ತಾಲೂಕು ಕಡಿಯಾಳಿಯ ನಿವಾಸಿ ಮಧು ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕಲ್ಸಂಕ ಬಳಿಯ ಬಡಗುಪೇಟೆಗೆ ಹೋಗುವ ರಸ್ತೆಯಲ್ಲಿ ಬಾಲಕಿಯನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಮದುವೆ ಮಾಡಿಕೊಡದಿದ್ದಲ್ಲಿ ಬಾಲಕಿ ಹಾಗೂ ಆಕೆಯ ತಾಯಿಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ.
ಇ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಮಧು ಎಂಬಾತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದರು
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ