ಸ್ವಂತ ಮಗಳ ಮೇಲೆಯೇ ಎರಡು ಬಾರಿ ಅತ್ಯಾಚಾರ ನಡೆಸಿದ ಆರೋಪದಡಿ ಬಂಧಿತನಾಗಿದ್ದ ತಂದೆಯ ಮೇಲಿನ ಆರೋಪಿಗಳು ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಅಪರಾಧಿಗೆ ಜೀವಾತಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರ ಮೇ ತಿಂಗಳಿನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಸ್ವತಃ ತಂದೆ 14 ವರ್ಷ ಪ್ರಾಯದ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ. ಎರಡನೇ ಬಾರಿಯೂ ಮನೆಯಲ್ಲಿ ಯಾರಿಲ್ಲದ ವೇಳೆ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು ಯಾರಿಗಾದರೂ ಹೇಳಿದಲ್ಲಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದ.
ಈ ಬಗ್ಗೆ ತನ್ನ ತಾಯಿಗೆ ಮಗಳು ಈ ವಿಚಾರವನ್ನು ತಿಳಿಸಿರುತ್ತಾರೆ. ಬಳಿಕ ತಾಯಿ ಈ ಬಗ್ಗೆ ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಆರೋಪಿ ತಂದೆಯನ್ನು ಬಂಧಿಸಲಾಗಿತ್ತು.
ಒಟ್ಟು 23 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 11 ಮಂದಿಯ ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತ ಬಾಲಕಿ, ಬಾಲಕಿಯ ತಾಯಿ ಹಾಗೂ ನೆರೆಮನೆಯಾಕೆ ನುಡಿದ ಸಾಕ್ಷಿಗಳು ನೆರವಾಗಿದ್ದವು..
ಅಪರಾಧಿಗೆ ಜೀವಿತಾವಧಿ ಜೈಲು ಶಿಕ್ಷೆ, 20 ಸಾವಿರ ರೂ.ದಂಡ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ 5 ಸಾವಿರ ರೂ.ದಂಡ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ ಸರಕಾರ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಲಾಗಿದೆ.
ಉಡುಪಿಯ ಪೊಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ