Slider


ಕುಂದಾಪುರ:-ಅತಿಥಿ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ...??19-12-2021

ಕುಂದಾಪುರ:-ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಅತಿಥಿ ಉಪನ್ಯಾಸಕರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಘಟನೆ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

ಇಲ್ಲಿನ ಇತಿಹಾಸ ವಿಭಾಗದ ಅತಿಥಿ ಉಪನ್ಯಾಸಕ ವಿಘ್ನೇಶ್ ಎಂಬುವವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.

ಆನ್‌ಲೈನ್ ತರಗತಿ ನಡೆಯುವ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕ ವಿಘ್ನೇಶ್ ವಿದ್ಯಾರ್ಥೀಯೋರ್ವಳ ಮೊಬೈಲ್‌ಗೆ ಆಶ್ಲೀಲ ಸಂದೇಶಗಳನ್ನು ಕಳುಹಿಸುತ್ತದರು ಎಂದು ಆರೋಪಿಸಲಾಗಿದೆ. ಜೊತೆಗೆ ವಿದ್ಯಾರ್ಥಿಯ ವಾಟ್ಸಾಪ್‌ಗೂ ಕೂಡಾ ಸಂದೇಶಗಳನ್ನು ರವಾನೆ ಮಾಡುತ್ತಿದ್ದ.

ಈ ಬಗ್ಗೆ ವಿಧ್ಯಾರ್ಥಿನಿ ಎಚ್ಚರಿಕೆ ನೀಡಿದ ಬಳಿಕ ಉಪನ್ಯಾಸಕ ಸಂದೇಶಗಳನ್ನು ಕಳುಹಿಸುವುದನ್ನು ನಿಲ್ಲಿಸಿದ್ದಾನೆ.

ಈ ಮತ್ತೆ ತನ್ನ ಹಳೆಚಾಳಿ ಮುಂದುವರಿಸಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo