Slider

ಗೋರಕ್ಷಕರ ಮೇಲಿನ ಹಲ್ಲೆ ಖಂಡನೀಯ.2-12-2021

ಉಡುಪಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸಮೀಪ ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ವಾಹನ ಚಲಾಯಿಸಿ, ಮಾರಣಾಂತಿಕ ದುಷ್ಕೃತ್ಯ ನಡೆಸಿರುವ ಘಟನೆ ದಿಗ್ಭ್ರಮೆ ಮೂಡಿಸಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಗೋರಕ್ಷಕರ ಮೇಲಿನ ಹಲ್ಲೆ ಖಂಡನೀಯ. ಗೋರಕ್ಷಣೆಯ ಕಾರ್ಯಕ್ಕೆ ಸವಾಲೆಸೆಯುವ ದುರುಳರ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ಗೋಹತ್ಯಾ ನಿಷೇಧ ಕಾನೂನು ಜಾರಿಗೆ ತಂದೂ ಪ್ರಯೋಜನವಿಲ್ಲದಂತಾಗಿದ್ದು, ಕಾನೂನಿನ ಪರಿಣಾಮಕಾರಿ ಅನುಷ್ಠಾನವಾಗಬೇಕು. ಸರ್ಕಾರಗಳು ಇಚ್ಛಾಶಕ್ತಿ ತೋರಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

ಈಚೆಗೆ ಗೋಹತ್ಯೆ, ಗೋಸಾಗಾಟ ಮುಲಾಜಿಲ್ಲದೆ ನಡೆಯುತ್ತಿರುವುದು ತೀರಾ ಆತಂಕಕಾರಿ. ಗೋವಿನ ಸಂಕುಲ ಉಳಿಸಲು ಸಮಾಜ ಕಂಕಣಬದ್ಧರಾಗಬೇಕು. ಬೀಡಾಡಿ ದನಗಳನ್ನು ರಕ್ಷಿಸಲು ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳಬೇಕು. ಬೆಜ್ಜವಳ್ಳಿ ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕಾರ್ಯಕರ್ತರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ
ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo