ಉಡುಪಿ:-ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ.
ಈತ ಯುವತಿಯರನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಬೆದರಿಕೆಯೊಡ್ಡುತ್ತಿದ್ದ ಎನ್ನಲಾಗಿದೆ. ವ್ಯಕ್ತಿಯೋರ್ವರು ನೀಡಿದ ದೂರಿನನ್ವಯ ಆರೋಪಿ ರಂಜಿತ್‌ನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ