Slider

ಬೆಳಗಾವಿ:-ಎಂ.ಇ.ಎಸ್ ನಿಷೇಧಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ಬಂದ್..?20-12-2021

ಬೆಳಗಾವಿ:-ಎಂ.ಇ.ಎಸ್ ನಿಷೇಧಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ಬಂದ್..?

ಎಂ.ಇ.ಎಸ್ ಸಂಘಟನೆ ನಿಷೇಧ ಮಾಡದಿದ್ದರೆ ಬುಧವಾರ ಕರ್ನಾಟಕ ಬಂದ್ ಬಗ್ಗೆ ಆಲೋಚಿಸುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು, ”ಎಂಇಎಸ್ ಸಂಘಟನೆಗೆ ರಾಜ್ಯದಲ್ಲಿ ನಿಷೇಧ ಹೇರಬೇಕು,ಇಂದು ಸಂಜೆ ಒಳಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಇಲ್ಲದೆ ಹೋದರೆ ಕನ್ನಡ ಸಂಘಟನೆಗಳು ಬುಧವಾರ ಸಭೆ ನಡೆಸಿ ಕರ್ನಾಟಕ ಬಂದ್ ಗೆ ತೀರ್ಮಾನಿಸುತ್ತವೆ” ಎಂದು ಹೇಳಿದ್ದಾರೆ.

ಕನ್ನಡ ಪರ ಹೋರಾಟಗಾರ, ವಾಟಾಳ್ ನಾಗರಾಜ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ವಿಪಕ್ಷವಾಗಿ ಜಾಣ ಕುರುಡು ತೋರುತ್ತಿದೆ. ಮಹಾರಾಷ್ಟದಲ್ಲಿ ಶಿವಸೇನೆ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಮೊನ್ನೆ ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮೆರವಣಿಗೆ ಮಾಡಿದ ಕಾಂಗ್ರೆಸ್ ಕನ್ನಡ ಪರ ಮೆರವಣಿಗೆ ಮಾಡಬೇಕಾಗಿತ್ತು. ಕನ್ನಡದ ಪರ ಧ್ವನಿ ಎತ್ತುವಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸಂಪೂರ್ಣ ವಿಫಲವಾಗಿದೆ”. ಎಂದರು.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo