Slider


ಮಂಗಳೂರು ವಿವಿ ಲಾಪ್‌ಟಾಪ್ ಹಗರಣ ಖಂಡಿಸಿ ಎ.ಬಿ.ವಿ.ಪಿ ಪ್ರತಿಭಟನೆ21-12-2021

ಅಖಿಲಾ ಭಾರತ ವಿದ್ಯಾರ್ಥಿ ಪರಿಷತ್
ಇದರ ಕಾರ್ಯಕರ್ತರಿಂದ ಇತ್ತೀಚೆಗೆ ವಿಶ್ವವಿದ್ಯಾನಿಲಯದಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಕೊಡಮಾಡುವ ಲಾಪ್‌ಟಾಪ್ ಗಳಲ್ಲಿ ಹಗರಣ ನಡೆದಿದೆ ಎನ್ನಲಾದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡಲಾಯಿತು. ಪ್ರತಿಭಟನೆಯಲ್ಲಿ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಸ್ತುತ ವರ್ಷದ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಇರುವ ಸಮಸ್ಯೆಗಳ ಕುರಿತು ಚರ್ಚಿಸಿ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ದೊರಕಿಸುವಂತೆ ಕುಲಪತಿಗಳು ಹಾಗೂ ಸಿಂಡಿಕೇಟ್ ಸದಸ್ಯರಲ್ಲಿ ಮನವಿ ಮಾಡಲಾಯಿತು.
 

ಕುಲಪತಿಗಳು ಹಗರಣದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನು ಮೂರು ದಿನಗಳಲ್ಲಿ ಪತ್ರಿಕಾಗೋಷ್ಠಿ ಕರೆದು ಹಗರಣದಲ್ಲಿ ನಡೆದ ಸಂಪೂರ್ಣ ನೈಜ ವಿಷಯವನ್ನು ಎಲ್ಲರಿಗೂ ತಿಳಿಸಲಾಗುವುದು. ನನ್ನ ಆಡಳಿತಾವಧಿಯ ಸಮಯದಲ್ಲಿ ಯಾವುದೇ ಭ್ರಷ್ಟಾಚಾರ ನಡೆಯಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು. ಇದೆ ವೇಳೆ ಎಬಿವಿಪಿಯ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo