ಮಿಕ್ಸಿ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ 76 ಬಡಗುಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಒಳಕಾಡು ನಿವಾಸಿ ಚಂದ್ರ ಜೋಗಿ (43) ಎಂದು ಗುರುತಿಸಲಾಗಿದೆ.
ಇವರು ಮನೆಯಲ್ಲಿ ರಾತ್ರಿ ಊಟಕ್ಕೆ ಚಟ್ನಿ ಮಾಡಲು ಮಿಕ್ಸಿ ಆನ್ ಮಾಡಿದ್ದು, ಆಗ ವೈರ್ ನಲ್ಲಿ ತೊಂದರೆ ಇರುವುದನ್ನು ಕಂಡು ರಿಪೇರಿ ಮಾಡಲು ಮುಂದಾದಾಗ ವಿದ್ಯುತ್ ಶಾಕ್ಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡ , ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ
ಇವರು ಖಾಸಗಿ ಶಾಲೆಯ ಬಸ್ವೊಂದರಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ