Slider


ಕಾಪು:-ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು23-12-2021

ಕಾಪು : ಕಾಪು ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ  ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತನ ಕುರಿತು ‌ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡಬೆಟ್ಟು ಗ್ರಾಮದ ಸರಕಾರಿ ಗುಡ್ಡೆಯ ನಿವಾಸಿ 42 ವರ್ಷದ ರವಿ ಮೃತ ದುರ್ದೈವಿ ಎಂದು ‌ತಿಳಿದುಬಂದದಿದೆ. 

ಇವರು ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಈ ನಡುವೆ  ಮದುವೆ ಕೂಡ ಆಗಿರಲಿಲ್ಲ. 
ಇದೇ ವಿಚಾರದಲ್ಲಿ ರವಿ  ಜೀವನದಲ್ಲಿ ಮನನೊಂದು ಡಿಸೆಂಬರ್ 16 ರಂದು ಮಧ್ಯಪಾನ ಮಾಡುವ ವೇಳೆ  ಬಿಯರ್‌ನಲ್ಲಿ ಇಲಿ ಪಾಷಾಣ ಸೇರಿಸಿ ಕುಡಿದಿದ್ದರು. 

ಕುಡಿದ ಬಳಿಕ ಮನೆಗೆ ಬಂದ ರವಿ ವಾಂತಿ ಮಾಡಿದ್ದು, ಇದನ್ನು ಗಮನಿಸಿದ ಮನೆಯವರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. 

 ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿ ಚಿಕಿತ್ಸೆ ಫಲಿಸದೆ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ‌. 

ಈ ಕುರಿತು ಕಾಪು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo