ಇಡೀ ಉಡುಪಿಯನ್ನ ಬೆಚ್ಚಿಬೀಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ರಾಜೇಶ್ವರಿ ಶೆಟ್ಟಿ ಅವರಿಗೆ ಜಾಮೀನು ಮಂಜೂರಾಗಿದೆ.
ರಾಜೇಶ್ವರಿ ಶೆಟ್ಟಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ತೀರ್ಪು ಹೊರಡಿಸಿದೆ. ೨೦೧೬ರ ಜುಲೈನಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಮತ್ತು ಮಗ ನವನೀತ್ ಶೆಟ್ಟಿ, ಹಾಗೂ ನಿರಂಜನ್ ಭಟ್ ಹೋಮಕುಂಡದಲ್ಲಿ ಹಾಕಿ ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು, ಇದಾದ ನಂತರ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿತ್ತು, ಇದೀಗ ಹೈಕೋರ್ಟ್ ರಾಜೇಶ್ವರಿ ಶೆಟ್ಟಿ ಅವರಿಗೆ ಜಾಮೀನು ಮಂಜೂರಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ