Slider


ಉಡುಪಿ:-ಶ್ರೀ ಕೃಷ್ಣ ಮಠ ವಶಕ್ಕೆ ಮುಂದಾಗಿದ್ದ ಕಾಂಗ್ರೆಸ್ ಸರ್ಕಾರ:-ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ24-12-2021

ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂದು ಶ್ರೀ ಕೃಷ್ಣ ಮಠದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.


ಹಿಂದಿನ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು, ಎಂಬುದನ್ನು ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದವರೇ ಬಹಿರಂಗಪಡಿಸಿದ್ದರು ಎಂದು ಹೇಳಿದ್ದಾರೆ.

ಈ ಸುದ್ದಿ ತಿಳಿದ ತಕ್ಷಣ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ, ‘ಉಡುಪಿ ಕೃಷ್ಣ ಮಠಕ್ಕೆ ಏನಾದರೂ ತೊಂದರೆಯಾದರೆ ಶಾಸಕ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡುವವ ನಾನಾಗಿರುತ್ತೇನೆ’ ಎಂಬುದಾಗಿ ಹೇಳಿ ಈ ಪ್ರಸ್ತಾವನೆಗೆ ಪೂರ್ಣವಿರಾಮ ಹಾಕುವ ಸಣ್ಣ ಸೇವೆ ಮಾಡಿದ್ದೇನೆ. ಈ ಬಗ್ಗೆ ನನಗೆ ತೃಪ್ತಿ ಇದೆ ಎಂದು ಹೇಳಿದರು.

ಇನ್ನು ನಾನು ಉಡುಪಿ ಕೃಷ್ಣ -ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಕ್ಕೆ ಕೆಲವರು ನನ್ನನ್ನು ಶಾಸಕ ಸ್ಥಾನವನ್ನು ರದ್ದು ಮಾಡುವಂತೆ ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಇದರಿಂದ ನನಗೇನು ತೊಂದರೆಯಾಗಿಲ್ಲ. ಆದರೆ ಇಂಥ ಮನಸ್ಥಿತಿಯ ಜನರೂ ಜಗತ್ತಿನಲ್ಲಿದ್ದಾರೆ ಎಂದು ಹೇಳಿದರು.

ಈ ವೇಳೆ ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo