ಜನಾರ್ದನ ಭಂಡಾರ್ಕರ್ ಅವರು ಕಳೆದ ಕೆಲವು ತಿಂಗಳಿನಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು , ಹೀಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ಉಡುಪಿ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಕೊಂಡು ಜಿಲ್ಲಾ ಕಾಂಗ್ರೆಸ್ ಬಲವರ್ಧನೆಗೆ ಸಾಕಷ್ಟು ಶ್ರಮ ವಹಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸೇರಿದಂತೆ ಅನೇಕ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಜನಾರ್ಧನ ಭಂಡಾರ್ಕರ್ ರವರ ಪಾರ್ಥಿವ ಶರೀರವನ್ನು ಬೆಳಗ್ಗೆ 9.30 ಕ್ಕೆ ಕರಂಬಳ್ಳಿಯಲ್ಲಿರುವ ಅವರ ಸ್ವಗೃಹಕ್ಕೆ ತಂದು, ತದನಂತರ 11 ಗಂಟೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಆವರಣದಲ್ಲಿ ಪಕ್ಷದ ಕಾರ್ಯಕರ್ತರಿಗೆ ,ಅವರ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರುತ್ತದೆ
12.30 ಗೆ ಇಂದ್ರಾಳಿ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ