Slider

ಮಣಿಪಾಲ:-೧೪ ವಿದ್ಯಾರ್ಥಿಗಳಿಗೆ ಕೊರೋನಾ , ಒಮಿಕ್ರಾನ್ ಆತಂಕ25-12-2021

ಮಣಿಪಾಲ್ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಮಿಕ್ರಾನ್ ಆತಂಕ ಎದುರಾಗಿದೆ.

ಮಣಿಪಾಲದ ಓರ್ವ ಎಂಐಟಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ಮೂರ್ನಾಲ್ಕು ದಿನಗಳಲ್ಲಿ ಕಾಲೇಜಿನ ಒಟ್ಟು 14 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಒಮಿಕ್ರಾನ್ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತ ವಿದ್ಯಾರ್ಥಿಗಳ ಸ್ಯಾಂಪಲ್ ನ್ನು ಬೆಂಗಳೂರು ಲ್ಯಾಬ್ ಗೆ ರವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo