ಮಹಿಳೆಯೊಬ್ಬರು ನಡೆದುಕೊಂಡು ಫೋನ್‌ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರರು ಅವರ ಮೊಬೈಲ್ ಪೋನ್ ಎಗರಿಸಿ ಪರಾರಿಯಾದ ಘಟನೆ ಉಡುಪಿಯ ಎಂಜಿಎಂ ಕಾಲೇಜು ಬಳಿ ನಡೆದಿದೆ.
ನಾಗವೇಣಿ ಎನ್ನುವವರ ಮೊಬೈಲ್ ಫೋನ್‌ಅನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ. ಇವರು ಫರ್ನೀಚರ್ ಅಂಗಡಿ ಒಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ