Slider

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಹುದ್ದೆಗಳು27-12-2021

ಇಲಾಖೆ:-ಕರ್ನಾಟಕ ರಾಜ್ಯ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದೇ ಡಿಸೆಂಬರ್ ತಿಂಗಳಲ್ಲಿ ಈ ಬಗ್ಗೆ ಪಂಚಾಯತ್ ರಾಜ್ ಇಲಾಖೆ ಅಧಿಕೃತ ಪ್ರಕಟಣೆಯನ್ನು ಒಂದನ್ನು ಹೊರಡಿಸಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.

ಹುದ್ದೆಯ ವಿವರ:-ಈ ಅಧಿಕೃತ ಪ್ರಕಟಣೆಯ ಪ್ರಕಾರ ಪಂಚಾಯತ್ ರಾಜ್ ಇಲಾಖೆಯಲ್ಲಿ ಒಂಬುಡ್ಸುಮೆನ್ ಹುದ್ದೆ ಖಾಲಿ ಇದ್ದು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಡೌನ್ಲೋಡ್ ಮಾಡಿ ಅಲ್ಲಿ ನೀಡಿರುವ ಫಾರ್ಮ್ ಭರ್ತಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಛೇರಿಗೆ ತಲುಪಿಸಬಹುದು.

ಶಿಕ್ಷಣ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು

ಅರ್ಜಿ ಸಲ್ಲಿಸಲು ಶುಲ್ಕ:-ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ. ಉಚಿತವಾಗಿ ಅರ್ಜಿ ‌ಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ:- ಅರ್ಜಿ ಸಲ್ಲಿಸಲು ನೀಡಲಾದ ಕೊನೆಯ ದಿನಾಂಕಕ್ಕೆ ಗರಿಷ್ಠ ೬೬ ವಯಸ್ಸು ಮೀರಿರಬಾರದು.

ದಾಖಲೆಗಳು:-ಇನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೋಡೋದಾದ್ರೆ, ಜನನ ಪ್ರಮಾಣ ಪತ್ರ, ಕಂಪ್ಯೂಟರ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ವಿದ್ಯಾರ್ಹತೆಯ ಪತ್ರಗಳು ಕಡ್ಡಾಯವಾಗಿ ಇರಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುತ್ತದೆ,

ದಿನಾಂಕ:-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದಿನ ವರ್ಷ ಜನವರಿ ೧೪ರವರೆಗೆ ಅವಕಾಶ ನೀಡಲಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವುದಾದದರೆ ಈ ಲಿಂಕ್ಇಲ್ಲಿ ಕ್ಲಿಕ್ ಮಾಡಿ ಮುಖಾಂತರ ನೇರವಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಡೌನ್ಲೋಡ್ ಮಾಡಿ ಅಲ್ಲಿ ನೀಡಿರುವ ಫಾರ್ಮ್ ಭರ್ತಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಛೇರಿಗೆ ತಲುಪಿಸಬಹುದು.


www.rdpr.karnataka.gov.in
ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo