ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಮಾತನಾಡಿದ್ದ ತೇಜಸ್ವಿ ಸೂರ್ಯ ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿಕೆ ನೀಡಿದ್ದರು. ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಕರೆತರಬೇಕು. ಪಾಕ್ಗೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು. ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಆದ್ದರಿಂದ ನಾನು ಹೇಳಿಕೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ” ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ