ಉಡುಪಿ:-ಶ್ರೀಕೃಷ್ಣ ಮಠದ ಪಾರ್ಕಿಂಗ್ ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ೮೦ ಸಾವಿರಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ.
ಗೋಕುಲ ಕೃಷ್ಣ ಎಂಬುವವರ ಕಾರಿನಲ್ಲಿ ಕಳವು ನಡೆದಿದ್ದು, ಇವರು ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಕಾರು ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದ ವೇಳೆ ಈ ಘಟನೆ ನಡೆದಿದೆ.
ದೇವಸ್ಥಾನಕ್ಕೆ ಹೋಗಿ ವಾಪಾಸ್ ಬಂದು ನೋಡುವಾಗ, ಕಾರಿನ ಸೈಡ್ ಗ್ಲಾಸ್ ಒಡೆದು ಕಳವು ಮಾಡಿರುವುದು ಗೊತ್ತಾಗಿದೆ. ಕಳವಾದ ಬ್ಯಾಗ್‌ನಲ್ಲಿ ೮೦೦೦೦ಕ್ಕೂ ಅಧಿಕ ಮೌಲ್ಯದ ವಸ್ತುಗಳು ಇತ್ತು ಎಂದಿದ್ದಾರೆ.
ಈ ಬಗ್ಗೆ ತಮಿಳುನಾಡು ಮೂಲದ ಗೋಕುಲ ಕೃಷ್ಣ ಎನ್ನುವವರು ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ