ಕೋಟ: ಕೋಟ ಹೋಬಳಿಯ ವ್ಯಾಪ್ತಿಯಲ್ಲಿ ಕೊರಗ ಸಮುದಾಯಕ್ಕೆ ಸೇರಿದ ಮನೆಯೊಂದರಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸರು ದಾಳಿ ನಡೆಸಿದಲ್ಲದೆ, ಮನೆಮಂದಿಯ ಮೇಲೆ ಲಾಠಿ ಚಾರ್ಜ್ ನಡೆಸಿರುವ ಆರೋಪ ಕೇಳಿ ಬಂದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟತಟ್ಟು ಗ್ರಾಮದ ಕೊರಗ ಸಮುದಾಯದ ಮನೆಯಲ್ಲಿ ನಿನ್ನೆ ರಾತ್ರಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿತ್ತು.
ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಕೋಟ ಆರಕ್ಷಕ ಠಾಣಾ ಪೊಲೀಸರು, ಡಿಜೆ ಸೌಂಡ್, ಲೈಟ್ ಆಫ್ ಮಾಡಿ ಹಸೆಮಣೆ ಏರುವ ಮಧುಮಗ, ಮನೆಯ ಹೆಣ್ಣುಮಕ್ಕಳೆಂದು ಸಹ ಲೆಕ್ಕಿಸದೇ ಲಾಠಿ ಪ್ರಹಾರ ಮಾಡಿದ್ದಾರೆಂದು ಮನೆಯವರು ದೂರಿದ್ದಾರೆ.
ಆ ಕಾರಣ ಪೊಲೀಸರನ್ನು ಅಮಾನತು ಮಾಡಿ ಎಂಬ ಮಾತುಗಳು ಅಲ್ಲಿ ಕೇಳಿ ಬರುತ್ತಿದೆ.
ಕೋಟಾ ಆರಕ್ಷಕ ಠಾಣೆಯ ಠಾಣಾಧಿಕಾರಿ ಸಂತೋಷ್ ಮತ್ತು ಸಿಬ್ಬಂದಿ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಲಾಠಿ ಚಾರ್ಜ್ ಮಾಡಿದ್ದಾರೆ.
ಈ ಕೂಡಲೇ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಅವರು ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಆಗ್ರಹಿಸಿದ್ದಾರೆ.
ಒಂದು ವೇಳೆ ಪೊಲೀಸರನ್ನು ಅಮಾನತು ಮಾಡದೆ ಹೋದಲ್ಲಿ ಉಡುಪಿ ಜಿಲ್ಲಾ ಎಸ್ಪಿ ಕಚೇರಿಯ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ