Slider

ಕೋಟ:-ಅಮಾಯಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಂಡನೆ28-12-2021

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದ ಸಮಾರಂಭವೊಂದಕ್ಕೆ ಏಕಾಏಕಿ ದಾಳಿ ಮಾಡಿದ ಪೊಲೀಸರು, ಮದುಮಗನ ಸಹಿತ ಅಮಾಯಕ ಕೊರಗರ ಮೇಲೆ ಹಲ್ಲೆ ಮಾಡಿದ್ದನ್ನು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಂಡಿಸಿದ್ದಾರೆ. 

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಆ  ಕುಟುಂಬಗಳು ನನಗೆ ಪರಿಚಯವಿದ್ದು, ಅಲ್ಲಿರುವ 9ಕ್ಕೂ ಹೆಚ್ಚು ಕುಟುಂಬದವರು ಅಮಾಯಕರಾಗಿದ್ದು, ಅವರ ಮೇಲೆ ವಿನಾಕಾರಣ ದೌರ್ಜನ್ಯ ಎಸಗಿರುವ ಪೊಲೀಸರ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಶ್ಚಿಮ ವಲಯ ಐಜಿಪಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
 

ಈಗಾಗಲೇ ಸ್ಥಳೀಯ ಶಾಸಕರಾದ ಮಾನ್ಯ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು,  ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸೂಚಿಸಿದ್ದು, ಹುಬ್ಬಳ್ಳಿಯಲ್ಲಿ ಪಾರ್ಟಿಯ ರಾಜ್ಯ ಕಾರ್ಯಕಾರಣಿಯಲ್ಲಿ ತಾನು ಭಾಗವಹಿಸಿದ್ದು, ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರ ಜೊತೆ ಮಾತನಾಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಮನವಿ ಮಾಡಿದ್ದೇನೆ.

ಸಂತ್ರಸ್ತ ಕೊರಗ ಜನಾಂಗದವರಿಗೆ ನ್ಯಾಯ ಒದಗಿಸುವಲ್ಲಿ ಮತ್ತು ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವ ವಿಚಾರದಲ್ಲಿ ಯಾವುದೇ ಆತಂಕ ಬೇಡ.  ನಾಳೆ  ಸದ್ರಿ ಕೊರಗ ಜನಾಂಗದ ಕೇರಿಗೆ ತಾನು ಭೇಟಿ ನೀಡಲಿದ್ದು, ನೊಂದ ಕುಟುಂಬದ ಜೊತೆ ಚರ್ಚಿಸಲಿದ್ದೇನೆ ಎಂದಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo