Slider

ಕುಂದಾಪುರ:-ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮಾಡಿದ್ದ ಸಾಲತೀರಿಸಲಾಗದೆ ಯುವಕ ಆತ್ಮಹತ್ಯೆ30-12-2021

ಕುಂದಾಪುರ : ಸಾಮಾಜಿಕ ಜಾಲತಾಣದ ಮೂಲಕ ಸಾಲ ಪಡೆಯುವ ಸೌಲಭ್ಯ ಇತ್ತೀಚೆಗೆ ಜಾರಿಯಲ್ಲಿದೆ. ಹಾಗೆಯೇ ಇಲ್ಲೋರ್ವ ಮೊಬೈಲ್ ಯಾಪ್ ನಲ್ಲಿ‌ ಸಾಲ ತೆಗೆದುಕೊಂಡಿದ್ದ. ತೆಗೆದುಕೊಂಡ ಸಾಲ ತೀರಿಸಲಾಗದೆ ಮರಣಪತ್ರ ಬರೆದಿಟ್ಟ ಎಮ್‌ಎನ್ಸಿ ಕಂಪೆನಿ ಉದ್ಯೋಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲುಕಿನ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಪೈಕಿ ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ಸಂಜೀವ ದೇವಾಡಿಗ ಹಾಗೂ ಕನಕ ಎಂಬವರ ಪುತ್ರ ವಿಘ್ನೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕನೆಂದು‌ ತಿಳಿದುಬಂದಿದೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಬೇಗನೇ ಮಲಗಿದ್ದ ವಿಘ್ನೇಶ್ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಮನೆ ಎದುರಿಗಿದ್ದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಂತರ ವಿಘ್ನೇಷ್ ತಾಯಿ ಬೆಳಿಗ್ಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಡೆತ್ ನೋಟ್‌ನಲ್ಲಿ ಏನಿದೆ..?
ಮರಣಪತ್ರ ದಲ್ಲಿ "ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡಿರುವ ಸಾಲ. ಮೊಬೈಲ್ ಯಾಪ್‌ನಲ್ಲಿ ಮಾಡಿಕೊಂಡ ಸಾಲ ನನಗೆ ತೀರಿಸಲು ಆಗುತ್ತಿಲ್ಲ. ಆದ್ದರಿಂದ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ. ನನ್ನ‌ ಸಾಲ ಇದೆ ಕಟ್ಟಿ ಎಂದು ಯಾರಾದರೂ ಕರೆ ಮಾಡಿದರೆ ಅವನು‌ ನಮಗೆ ಗೊತ್ತಿಲ್ಲ ಅಥವಾ ಸತ್ತು ಹೋದ ಎಂದು ಹೇಳಿ ಬಿಡಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿದ್ದೇನೆ. ಕ್ಷಮಿಸಿ ಬಿಡಿ. ಕೆಳಗಡೆ ಆಫೀಸ್ ಕೆಲಸ ಮಾಡುವವನ‌ ನಂಬರ್ ಇದೆ. ಕಾಲ್‌ ಮಾಡಿ ತಿಳಿಸಿ ಬಿಡಿ. ಶುಕ್ರವಾರ ಸಂಬಳ ಬರುತ್ತದೆ" ಎಂದು ಎಟಿಎಂ ಪಾಸ್ವರ್ಡ್ ನಮೂದಿಸಿದ್ದಾರೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo