Slider

ಕೋಟಾ ಶ್ರೀನಿವಾಸ ಪೂಜಾರಿ ಅಸಮರ್ಥ ಸಚಿವ, ಆತ್ಮವಂಚಕ, ಕೋಟಾ ಹಲ್ಲೆ ಪ್ರಕರಣ ಉಲ್ಲೇಖಿಸಿ ಸಿದ್ದರಾಮಯ್ಯ ವಾಗ್ದಾಳಿ31-12-2021

ಮೆಹೆಂದಿ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ:-ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.

ಮೆಹೆಂದಿ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ

ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ?. ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ ಎಂದ ಅವರು ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ ಎಂದು ಟೀಕಿಸಿದ್ದಾರೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo