Slider

ಮಂಗಳೂರು:-ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ31-12-2021

ಮಂಗಳೂರು: ಕೊರೊನಾ ರೂಪಾಂತರಿ ವೈರಸ್ ಓಮಿಕ್ರಾನ್ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್‌ ಸೇರಿದಂತೆ ಪ್ರಮುಖ ಬೀಚ್‌ಗಳಿಗೆ ಡಿಸೆಂಬರ್. 31 ರ ಶುಕ್ರವಾರದಂದು ಸಂಜೆ 7:00 ಯ ಗಂಟೆಯ ಬಳಿಕ ಸಾರ್ವಜನಿಕರಿಗೆ ಪ್ರವೇಶ  ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ದಕ್ಷಿಣ.ಕನ್ನಡ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ದು, ರಾತ್ರಿ 10:00 ಇಂದ ಬೆಳಿಗ್ಗೆ 5:00 ಗಂಟೆಯವರೆಗೆ ಜನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.‌ ಆದರೆ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕತ್ತಲಾದ ಬಳಿಕ ಬೀಚ್ ಬಳಿ ಸಾರ್ವಜನಿಕರು ಅಧಿಕವಾಗಿ ಸೇರಬಹುದಾದ ಕಾರಣದಿಂದಾಗಿ ಜಿಲ್ಲಾಧಿಕಾರಿ ಸಾರ್ವಜನಿಕರ ಪ್ರವೇಕ್ಕೆ ನಿಷೇಧ ಹೇರಿದ್ದಾರೆ.

ಬೀಚ್‌ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಸಂಭ್ರಮಾಚರಣೆ ನಡೆಸಬಾರದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌‌ ಕೂಡ ನಿಷೇಧ ವಿಧಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo