ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಜಟ್ಟಿ ನಿರ್ಮಾಣಕ್ಕೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ರೂ. 9.6 ಕೋಟಿ ಮಂಜೂರಾಗಿ ಕಾಮಗಾರಿ ನಡೆಯುತ್ತಿದ್ದು, ಇಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು.
ನಂತರ ಮುಂದೆ ನದಿ ದಂಡೆ ಕಾಮಗಾರಿ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ಯೋಗೀಶ್ ಸಾಲ್ಯಾನ್, ಸುಂದರ್ ಕಲ್ಮಾಡಿ, ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷರಾದ ದಯಾನಂದ ಸುವರ್ಣ, ಉಪಾಧ್ಯಕ್ಷರಾದ ರಮೇಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರತ್ನಾಕರ ಸಾಲ್ಯಾನ್ ಹಾಗೂ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉದಯ್ ಕುಮಾರ್, ಸಹಾಯಕ ಅಭಿಯಂತರರಾದ ಜಯರಾಜ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಗಣೇಶ್, ಸಹಾಯಕ ನಿರ್ದೇಶಕರಾದ ಶಿವಕುಮಾರ್, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ