ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (೮೫) ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟರಾದ ಶಿವರಾಂ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು, ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಎಂದು ಟ್ವೀಟ್ ಮಾಡಿದ್ದಾರೆ.
ನಟ ಶಿವರಾಂ ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ನಟರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ