ಉಡುಪಿ, ಡಿಸೆಂಬರ್ 4: ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆದಿದ್ದು, 158 ಚುನಾವಣಾಧಿಕಾರಿ, 158 ಸಹಾಯಕ ಚುನಾವಣಾಧಿಕಾರಿ, 158 ಮೈಕ್ರೋಅಬ್ಸರ್ವರ್, 158 ರೂಫ್ ಡಿ, 158 ರೂಟ್ ಅಧಿಕಾರಿಗಳು, 158 ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಚುನಾವಣೆಯಲ್ಲಿ ಜಿಲ್ಲೆಯ ಒಟ್ಟು 2505 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷö್ಮ, 2 ಅತೀ ಸೂಕ್ಷö್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ. ಮತದಾನದ ದಿನದಂದು ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲು ವ್ಯವಸ್ಥೆ ಮಡಿಕೊಳ್ಳಲಾಗಿದೆ. ಚುನಾವಣಾ ಕಣದಲ್ಲಿ ಒಟ್ಟು 3 ಮಂದಿ ಅಭ್ಯರ್ಥಿಗಳಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಎಲ್ಲಾ ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯೊಂದಿಗೆ ಚುನಾವಣೆ ನಡೆಯಲಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ