ಉಡುಪಿ,: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಕೋವಿಡ್ ನಿಯಮಾವಳಿ ಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇರುವುದು ಕಂಡುಬಂದಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ
ಜಿಲ್ಲೆಯಲ್ಲಿ ವಾಣಿಜ್ಯ ಮಳಿಗೆ, ಮಾಲ್ ಅಥವಾ ಇನ್ನಿತರ ಉದ್ದಿಮೆಗಳಲ್ಲಿ ಸಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಪ್ರವೇಶ ದ್ವಾರದಲ್ಲಿ ತಾಪಮಾನ ಪರಿಶೀಲಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು.
ಕೋವಿಡ್ ರೋಗ ಲಕ್ಷಣ ಇರುವವರಿಗೆ ಪ್ರವೇಶ ನೀಡಬಾರದು, ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60, ಭಾರತ ದಂಡ ಸಂಹಿತೆ ಹಾಗೂ ಅನ್ವಯವಾಗ ಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕಠಿಣ ಕ್ರಮ ಕೈಗೊಂಡು ನಗರಸಭೆ ವತಿಯಿಂದ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ