ಉಡುಪಿ: ಜೀವನದಲ್ಲಿ ಮಾನಸಿಕವಾಗಿ ನೊಂದುಕೊಂಡು ಕುಗ್ಗಿಹೋಗಿದ್ದ ಯುವಕನೋರ್ವ ದೇವಸ್ಥಾನವೊಂದರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ದಕ್ಷಿಣಕನ್ನಡ ಜಿಲ್ಲೆಗೆ ಸೇರಿದವನಾಗಿದ್ದು ಉಡುಪಿ ಜಿಲ್ಲೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡವರು ಕುರಿತು ಮಂಗಳೂರಿನ ಪಾಂಡೇಶ್ವರದ ಯಡಬೆಟ್ಟು ನಿವಾಸಿ ಸುನೀಲ್ ಮೊಗವೀರ ಎಂದು ತಿಳಿದುಬಂದಿದೆ. ಈತ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಂದು ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದಲ್ಲಿ ದರ್ಶನ ಪಡೆದ ಬಳಿಕ ಈತ, ಅಲ್ಲಿನ ದೇವಸ್ಥಾನದ ಕೆರೆಗೆ ಹಾಕಲಾಗಿದ್ದ ಕಬ್ಬಿಣದ ಬೇಲಿಯನ್ನು ದಾಟಿ ಕೆರೆಗೆ ಹಾರಿದ್ದಾನೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದರೂ ಆತನನ್ನು ಉಳಿಸಿಕೊಳ್ಳಲು ಆಗಿಲ್ಲ.
ಸುನೀಲ್ ವೃತ್ತಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಸುನೀಲ್, ಇತ್ತೀಚೆಗೆ ಕೆಲವು ದಿನಗಳಿಂದ ಸರಿಯಾದ ಕೆಲಸವಿಲ್ಲದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ.
ಈ ಕುರಿತು ಕೋಟ ಆರಕ್ಷಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ