ಮತಾಂತರ ನಿಷೇಧ ಮಸೂದೆ ಮಂಡನೆ..!!
ಸುವರ್ಣ ಸೌಧದಲ್ಲಿ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೃಹ ಸಚಿವ ಆರಗ ಜ್ಞಾನೇಂದ್ರ ಮತಾಂತರ ನಿಷೇಧ ಮಸೂದೆ ಮಂಡನೆ ಮಾಡಿದ್ದಾರೆ.
ಮಸೂದೆ ಮಂಡನೆ ಮಾಡುತ್ತಿದ್ದಂತೆ ವಿಪಕ್ಷಗಳು ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಸೂದೆಯ ಪ್ರತಿಯನ್ನು ಹರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಸೂದೆಯ ಬಗ್ಗೆ ನಾಳೆ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ