ಮತಾಂತರ ನಿಷೇಧ ಕಾಯ್ದೆ ಅಂಗೀಕಾರ...!!
ಬಹುನಿರೀಕ್ಷಿತ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಕಾನೂನಿಗೆ ಸದನ ಅನುವೋದನೆ ನೀಡಿದ್ದು ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ.
ಸುದೀರ್ಘ ಚರ್ಚೆಯ ನಂತರ ಧ್ವನಿ ಮತದ ಮೂಲಕ ಬಲವಂತದ ನಿಷೇಧ ಕಾಯ್ದೆ ಅಂಗೀಕಾರವಾಗಿದೆ.
ಇಂದು ಬೆಳಿಗ್ಗೆ ಯಿಂದ ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಸುಧೀರ್ಘ ಚರ್ಚೆ ನಡೆಯಿತು. ಈ ಕಾಯ್ದೆಯ ಬಗ್ಗೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆ.ಡಿ.ಎಸ್. ತೀವ್ರ ವಿರೋಧ ವ್ಯಕ್ತಪಡಿಸಿತ್ತು, ಮತ್ತು ಕಾಂಗ್ರೆಸ್ ಸದನದ ಬಾವಿಗಿಳಿದು ಬಿಜೆ.ಪಿ. ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ