Slider

ನನ್ನ ವಿರುದ್ಧ ಸಮಾಜವನ್ನು ಎತ್ತಿಕಟ್ಟುವ ಪ್ರಯತ್ನ:-ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ

ಮಾಧ್ಯಮಗಳು ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ತಿರುಚಿ ಸಮಾಜವನ್ನು ನನ್ನ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿವೆ ಎಂದು ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆರೋಪಿಸಿದ್ದಾರೆ

ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಅವರು, ಮಾಧ್ಯಮಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಹೊರಬೇಕು, ಸಮಾಜದ ಸ್ವಾಸ್ಥ್ಯ ಹಾಳುಮಾಡುವ ದುಸ್ಸಾಹಸಕ್ಕೆ ಕೈಹಾಕಬಾರದು, ಕೆಲವು ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚಿವೆ. ನನ್ನ ಅಭಿಪ್ರಾಯ ತಿರುಚಿ ನನ್ನ ವಿರುದ್ದ ಎತ್ತಿಕಟ್ಟುವ ಘಟನೆ ನಡೆದಿದ್ದು, ಇದನ್ನ ನಾನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ಮಾಧ್ಯಮಗಳು ಶಾಲೆಯಲ್ಲಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ಕೇಳಿದ್ದರು, ಇದಕ್ಕೆ ಸಹಜವಾಗಿ ನಾನು ಆಹಾರದ ಹಕ್ಕು, ಸ್ವಾತಂತ್ರ್ಯ ಎಲ್ಲರಿಗೂ ಇದೆ, ಸಸ್ಯಹಾರಿಗಳಿಗೆ ಮೊಟ್ಟೆ ತಿನ್ನಿಸುವ ಕೆಲಸ ಅಗಬಾರದು, ಶಾಲೆಯಲ್ಲಿ ಕೆಲವರಿಗೆ ಮೊಟ್ಟೆ ವಿತರಣೆ, ಕೆಲವರಿಗೆ ನೀಡದಿರುವುದು ಮತಬೇದಕ್ಕೆ ಕಾರಣವಾಗುತ್ತೆ , ಹೀಗಾಗಿ ಶಾಲೆಯಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದೆ. ಆದರೆ ಬಳಿಕ ಮಾಹಿತಿಯ ಪ್ರಕಾರ ಶಾಲೆಯಲ್ಲಿ ಮೊಟ್ಟೆ ತಿನ್ನುವವರಿಗೆ ಮೊಟ್ಟೆ ಕೊಡುತ್ತಾರೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುತ್ತಾರೆ. ಈ ವಿಚಾರ ನಮಗೆ ತಿಳಿಸದೆ ಮೊಟ್ಟೆ ಹಂಚುವ ಕುರಿತು ಅಭಿಪ್ರಾಯವೇನು ಎಂಬ ಅರ್ಧ ಸತ್ಯ ಕೇಳಲಾಗಿದೆ ಎಂದಿದ್ದಾರೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo