ಕರ್ನಾಟಕ ರಾಜ್ಯ ಸರ್ಕಾರದ ಆರ್.ಟಿ.ಓ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ.
ಹುದ್ದೆಯ ವಿವರ:-ಈ ಅಧಿಕೃತ ಪ್ರಕಟಣೆಯ ಪ್ರಕಾರ ಆರ್.ಟಿ.ಓ ಎಸ್.ಡಿ.ಎ, ಎಫ್.ಡಿ.ಓ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದಾಗಿದೆ. ಆರ್.ಟಿ.ಓದಲ್ಲಿನ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬಹುದಾಗಿದೆ.
ಶಿಕ್ಷಣ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪಿ.ಯು.ಸಿ. ಅಥವಾ ಪದವಿ ಹೊಂದಿರಬೇಕು
ಅರ್ಜಿ ಸಲ್ಲಿಸಲು ಶುಲ್ಕ:-ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ೧೮ ವರ್ಷ ಮತ್ತು ಗರಿಷ್ಠ ೩೫ ವಯಸ್ಸು ಮೀರಿರಬಾರದು. ಎಂದು ಪ್ರಕಟಣೆ ತಿಳಿಸಿದೆ.
ದಾಖಲೆಗಳು:-ಇನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೋಡೋದಾದ್ರೆ, ಜನನ ಪ್ರಮಾಣ ಪತ್ರ, ಕಂಪ್ಯೂಟರ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ವಿದ್ಯಾರ್ಹತೆಯ ಪತ್ರಗಳು ಕಡ್ಡಾಯವಾಗಿ ಇರಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುತ್ತದೆ,
ದಿನಾಂಕ:-ಅರ್ಜಿ ಸಲ್ಲಿಸುವ ದಿನಾಂಕವನ್ನು ಇಲಾಖೆ ಇನ್ನಷ್ಟೇ ಪ್ರಕಟಿಸಬೇಕಾಗಿದೆ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಲಾಖೆ ದಿನಾಂಕ ಪ್ರಕಟಿಸಿದಾಗ ನಿಮಗೆ ಆ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ .
ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವುದಾದದರೆ ಈ ಲಿಂಕ್ ಕ್ಲಿಕ್ ಮಾಡಿ ಮುಖಾಂತರ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ