Slider

ಉಡುಪಿ:-ಕೊರಗರ ಮೇಲಿನ ಕೇಸ್ ಹಿಂಪಡೆಯಲು ಎಸ್ಪಿಗೆ ಮನವಿ ನೀಡಿದ ಉಡುಪಿ ಜಿಲ್ಲಾ ಕಾಂಗ್ರೆಸ್1-1-2021

ಕೊರಗರ ಮೇಲಿನ ಕೇಸ್ ಹಿಂಪಡೆಯಲು ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

ಕೋಟತಟ್ಟುವಿನಲ್ಲಿ ನಡೆದ ಕೊರಗರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೀಡಿದ ದೂರಿನನ್ವಯ ಕೊರಗರ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್, ಪೊಲೀಸ್ ಸುಪರಿಂಟೆಂಡೆಂಟ್ ಅವರಿಗೆ ಪ್ರಕರಣ ಹಿಂಪಡೆಯುವಂತೆ ಮನವಿ ಸಲ್ಲಿಸಿತು.

ಕೊರಗರ ಮೇಲೆ ಸುಳ್ಳು ಪ್ರಕರಣವನ್ನು ದಾಖಲಿಸಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗಿದೆ. ಹೀಗಾಗಿ ಕೊರಗ ಮೇಲೆ ದಾಖಲಾದ ಪ್ರಕರಣದ ಸತ್ಯಾಸತ್ಯತೆಯನ್ನು ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ಮುಖಂಡರಾದ ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಹರಿಶ್ ಶೆಟ್ಟಿ ಪಾಂಗಾಳ, ರೋಶನಿ ಒಲಿವರಾ, ಶಂಕರ್ ಕುಂದರ್, ರವೀಂದ್ರ ಕಾಮತ್, ನಟರಾಜ ಹೊಳ್ಳ, ಗಣೆಶ್ ನೆಲ್ಲಿಬೆಟ್ಟು, ಬಸವ ಪೂಜಾರಿ ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo