ಉಡುಪಿ ಜಿಲ್ಲಾ ಗುತ್ತಿಗೆದಾರರಿಗೆ ತಾವು ಮಾಡಿದ ಕಾಮಗಾರಿಗೆ ಬಿಲ್ ಪಾವತಿಯಲ್ಲಿ ಆಗುತ್ತಿರುವ ಸಮಸ್ಯೆ ಹಿನ್ನೆಲೆಯಲ್ಲಿ ಗುತ್ತಿಗೆದಾರರ ಕಷ್ಟವನ್ನು ಅರಿತು ಗುತ್ತಿಗೆದಾರರರ ಸಮಸ್ಯೆಗೆ ಸಮರ್ಪಕವಾಗಿ ಸ್ಪಂದಿಸಲು ಆಗದೆ ಇರುವ ಕಾರಣ ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದಯ್ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.
ಕೆಳೆದ ಕೆಲವು ವರ್ಷಗಳಿದ ಕಾಂಟ್ರಾಕ್ಟ್‌ರುಗಳು ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಗುತ್ತಿಗೆ ಪಡೆದ ಕಾಮಗಾರಿಯನ್ನು ಸಾಲ ಮಾಡಿಯಾದರೂ ಪೂರ್ಣಗೊಳಿಸಿ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ . ಆದರೆ ಹೆಚ್ಚಿನ ಗುತ್ತಿಗೆದಾರರಿಗೆ ಹಲವಾರು ವರ್ಷಗಳಿಂದ ಬಿಲ್ ಗಳು ಬಾಕಿ ಇದೆ. ಇಂದಿನ ಈ ವ್ಯವಸ್ಥೆಗಳ ನಡುವೆ ಗುತ್ತಿಗೆ ಕಾಮಗಾರಿಗಳನ್ನು ನಡೆಸುತ್ತಿರುವ ಕಾಂಟ್ರಾಕ್ಟ್‌ರುಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ