Slider

ಉಡುಪಿ:-ಮೆಹಂದಿ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದ ಮೇಲೆ ಹಲ್ಲೆ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಖಂಡನೆ.1-1-22

ಕೋಟ:-ಕೋಟದಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದ ಮೇಲಿನ ಹಲ್ಲೆಗೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮತ್ತು ಹಿಂದುಳಿದವರ ಏಳಿಗೆಯ ಬಗ್ಗೆ ಬಿಜೆಪಿ ಸರಕಾರ ಮೊಸಳೆ ಕಣ್ಣೀರನ್ನು ಸುರಿಸುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂದಿದ್ದಾರೆ. ಕೊರಗ ಕುಟುಂಬದ ಮೇಲಿನ ದೌರ್ಜನ್ಯವು ಅಮಾನವೀಯವಾಗಿದ್ದು, ಸರಕಾರದ ಆಡಳಿತ ವೈಫಲ್ಯಕ್ಕೆ ಸಂಕೇತವಾಗಿದೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ

ಸರಕಾರವು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.ಇಂಥ ಘಟನೆಗಳು ಮುಂದುವರಿದಲ್ಲಿ ಸರಕಾರದ ವಿರುದ್ಧ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ವರದಿ:-ಉಡುಪಿ ಫಸ್ಟ್.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo