ರಾಜ್ಯದಲ್ಲಿ ಕೊರೋನಾ ವಿರುದ್ಧ ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ.100 ರಷ್ಟು ಹಾಗೂ 2ನೇ ಡೋಸ್ನಲ್ಲಿ ಶೇ.85 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಇನ್ನು 15 ರಿಂದ 18 ವರ್ಷದ ಶೇ.67.5 ರಷ್ಟು ಮಕ್ಕಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಇದೇ ವೇಳೆ 4,85,818 ಆರೋಗ್ಯ ಸಿಬ್ಬಂದಿ, ವೈದ್ಯರಿಗೆ ಬೂಸ್ಟರ್ ಡೋಸ್ ನೀಡಲಾಗಿದೆ. ಒಟ್ಟು 9,33,92,626 ಡೋಸ್ಗಳನ್ನು ಈವರೆಗೆ ನೀಡಲಾಗಿದೆ ಎಂದು ಹೇಳಿದರು.
ಕೊರೋನಾ ಸೋಂಕಿನ ಪ್ರಮಾಣ ಸದ್ಯ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಡಿಮೆಯಾಗಲಿದೆ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದ್ದು, ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ