Slider


ಬ್ರಹ್ಮಾವರ:-ರಸ್ತೆ ಅಪಘಾತ ಗೃಹಿಣಿ ಸಾವು 19-1-2022

ಬ್ರಹ್ಮಾವರ : ಪತಿ ಮತ್ತು ಮಗನೊಂದಿಗೆ ಸಾಂತ್ಮಾರಿ ಹಬ್ಬಕ್ಕೆ ತೆರಳುತ್ತಿದ್ದ ಗೃಹಿಣಿಯೋರ್ವರು ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡಿ ಇಂದು ನಿಧನರಾಗಿದ್ದಾರೆ.

ಕೆಲವೇ ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ್ದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗನೊಂದಿಗೆ ಕೋಟದಲ್ಲಿರುವ ತನ್ನ ತಂದೆ ತಾಯಿ ಮನೆಗೆ ದ್ವಿಚಕ್ರ ವಾಹನದಲ್ಲಿ ಸೋಮವಾರ ತೆರಳುತ್ತಿದ್ದ ಸರಿತಾ ಪಿಂಟೊ (38), ಬ್ರಹ್ಮಾವರದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಪತಿ ಮತ್ತು ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ತಲೆಗೆ ಗಂಭೀರ ಗಾಯಗೊಂಡಿದ್ದ ಸರಿತಾರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು, 2 ದಿನಗಳ ಜೀವನ್ಮರಣ ಹೋರಾಟದಲ್ಲಿದ್ದ ಸರಿತಾ ಇಂದು ನಿಧನರಾಗಿದ್ದಾರೆ. ಹತ್ತು ವರ್ಷಗಳ ಹಿಂದೆ ಉದ್ಯಾವರದ ಅಂಕುದ್ರು ನಿವಾಸಿ ಅನಿಲ್ ಪಿಂಟೊರವರೊಂದಿಗೆ ವಿವಾಹವಾಗಿದ್ದ ಸರಿತಾ, ಸರಳ ಮತ್ತು ಶಾಂತ ಸ್ವಭಾವದವರಾಗಿದ್ದು, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. 

ಮೃತರು ಸಹೋದರ ಧರ್ಮಗುರು, ತಾಯಿ, ಪತಿ, ಪುತ್ರಿ, ಪುತ್ರ, ಇಬ್ಬರು ಸಹೋದರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಗುರುವಾರ ಜನವರಿ.20 ರಂದು ಉದ್ಯಾವರದಲ್ಲಿ ನಡೆಯಲಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo