Slider

ಉಡುಪಿ:-ಹಿಜಾಬ್ ಧರಿಸಿ ತರಗತಿಗೆ ಆಗಮಿಸಲು ಅನುಮತಿ ಇಲ್ಲಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ2-1-2021

ಉಡುಪಿ:-ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜಾಬ್ ಧರಿಸಿ ತರಗತಿಗೆ ಆಗಮಿಸಲು ಅನುಮತಿ ನೀಡದಿರಲು ಶಾಸಕ ರಘುಪತಿ ಭಟ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಹಿಜಾಬ್ ಧರಿಸಲು ಈ ಹಿಂದಿನಿಂದಲೂ ಕಾಲೇಜಿನಲ್ಲಿ ಅವಕಾಶವಿರಲಿಲ್ಲ, ಹೀಗಾಗಿ ಅದೇ ನೀತಿಯನ್ನು ಮುಂದುವರಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಲೇಜಿನ ಪ್ರಾಂಶುಪಾಲರು, ಕಾಲೇಜಿನಲ್ಲಿ ಹೊಸದಾಗಿ ಯಾವುದೇ ರೀತಿಯ ಡ್ರೆಸ್‌ಕೋಡ್‌ಗೆ ಅವಕಾಶ‌ವಿರುವುದಿಲ್ಲ, ಈ ಹಿಂದಿನ ಡ್ರೆಸ್‌ಕೋಡ್ ಅಂತಿಮ ಎಂದಿದ್ದಾರೆ. ಜೊತೆಗೆ ಈ ನಿರ್ಣಯಕ್ಕೆ ಪೋಷಕರು ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ವರದಿ:-ಉಡುಪಿ ಫಸ್ಟ್.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo